Sunday, May 19, 2024
spot_imgspot_img
spot_imgspot_img

ಮಂಗಳೂರು: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಮಂಗಳೂರು: ಯುವಕನೋರ್ವ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ನಗರದ ಲಾಡ್ಜ್ ವೊಂದರಲ್ಲಿ ರೂಮ್‌ನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿದ ಯುವಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಅಭಿಷೇಕ್ (27) ಎಂದು ಗುರುತಿಸಲಾಗಿದೆ.

ಈತ ಮಾ.6ರ ಸಂಜೆ 5:30ರಿಂದ ಮಾ.7ರ ರಾತ್ರಿ 8ರ ನಡುವೆ ನಗರದ ಕೆ ಎಸ್ ರಾವ್ ರಸ್ತೆಯಲ್ಲಿರುವ ಲಾಡ್ಜ್ ವೊಂದರಲ್ಲಿ ಜೀವನದಲ್ಲಿ ಜಿಗುಪ್ಪೆ ಹೊಂದಿ ಕೊಠಡಿಯ ಫ್ಯಾನಿಗೆ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಈತ ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!