- Advertisement -
- Advertisement -




ಮಂಗಳೂರು: ಸುರತ್ಕಲ್‌ನ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ನಡೆದಿದೆ.
ನೀರುಪಾಲಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸೋಮಯಾಜಿ ಟೆಕ್ಸ್‌ಟೈಲ್ ಮಾಲಕನ ಪುತ್ರ ಪ್ರಜ್ವಲ್ (21) ಎಂದು ಗುರುತಿಸಲಾಗಿದೆ.
ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ನೀರು ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಯುವಕನ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
- Advertisement -