Sunday, August 16, 2026
spot_imgspot_img
spot_imgspot_img

ಮಂಗಳೂರು: ಮನೆಯಿಂದ ಹೊರ ಹೋದ ಯುವತಿ ವಾಪಸು ಬಾರದೆ ನಾಪತ್ತೆ..!

- Advertisement -
- Advertisement -

ಮಂಗಳೂರು: ಮೊಬೈಲ್‌ನಲ್ಲಿ ಪಬ್‌ಜಿ ಆಟವಾಡುವ ಹವ್ಯಾಸವಿದ್ದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಬಿಜೈ ಎಂಬಲ್ಲಿ ನಡೆದಿದೆ.

ನಾಪತ್ತೆಯಾದ ಯುವತಿ ಕೆಲಿಸ್ತಾ ಫೆರಾವೊ (18) ಎಂದು ಗುರುತಿಸಲಾಗಿದೆ.

ಇವರು ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದರು. ಈಕೆ ಮಂಗಳವಾರ ಮಧ್ಯಾಹ್ನ 12.15ರ ಸುಮಾರಿಗೆ ಮನೆಯಿಂದ ಹೊರಗೆ ಹೋಗಿದ್ದರು. ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದರು. ಸಿಸಿ ಕೆಮರಾವೊಂದನ್ನು ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವ ದೃಶ್ಯ ಸೆರೆಯಾಗಿತ್ತು.

ಕೆಲಿಸ್ತಾ ಕನ್ನಡ, ತುಳು, ಇಂಗ್ಲಿಷ್, ಕೋಂಕಣಿ ಭಾಷೆಗಳನ್ನು ಮಾತನಾಡುತ್ತಾಳೆ. ಬಿಳಿ ಟಾಪ್ ಮತ್ತು ನೀಲಿ ಜೀನ್ಸ್ ಪ್ಯಾಂಟ್ ಧರಿಸಿದ್ದಳು. ಮಾಹಿತಿ ದೊರೆತವರು ಬರ್ಕೆ ಪೊಲೀಸ್ ಠಾಣೆ (0824-2220522) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ. ಈಕೆಗೆ ಪಬ್‌ಜಿ ಗೇಮ್‌ನ ಅಭ್ಯಾಸವಿತ್ತು. ಈಕೆ 9ನೇ ತರಗತಿಯಲ್ಲಿದ್ದಾಗಲೂ ಪಬ್‌ಜಿ ಆಡುತ್ತಿದ್ದಳು. ನಂತರ ಪಬ್‌ಜಿ ಆಟ ಆಡುವುದು ಗೀಳಾಗಿ ಪರಿಣಮಿಸಿದೆ. ಇದರಿಂದ ಮನೆಯಲ್ಲಿ ಈ ಹಿಂದೆ ಜಗಳವೂ ಆಗಿತ್ತು ಎನ್ನಲಾಗಿದೆ.

- Advertisement -

Related news

error: Content is protected !!