Monday, April 29, 2024
spot_imgspot_img
spot_imgspot_img

ಮಂಗಳೂರು: ಕಾಲೇಜಿನ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ABVPಯಿಂದ ಹಿಂದೂ ಮುಖಂಡನಿಗೆ ಆಹ್ವಾನ; NSUIಯಿಂದ ಮುತ್ತಿಗೆ ಬೆದರಿಕೆ- ಕಾರ್ಯಕ್ರಮ ರದ್ದು

- Advertisement -G L Acharya panikkar
- Advertisement -

ಮಂಗಳೂರು: ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಬಲಪಂಥೀಯ ಲೇಖಕ, ಭಾಷಣಗಾರ ಶ್ರೀಕಾಂತ್‌ ಶೆಟ್ಟಿ ಕಾರ್ಕಳ ಅವರನ್ನು ಕರೆಸಿರುವುದಕ್ಕೆ ಎನ್‌ಎಸ್ ಯುಐ ವಿದ್ಯಾರ್ಥಿ ಸಂಘಟನೆ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಬೆದರಿಕೆ ಒಡ್ಡಿದ್ದರಿಂದ ಜೂನ್‌ 23ರಂದು ನಡೆಯುವ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನೇ ರದ್ದುಪಡಿಸಲಾಗಿದೆ.

ಜೂನ್ 23ರಂದು ಬೆಳಗ್ಗೆ 9 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಗೆ ಕಾಲೇಜಿನ ಎಬಿವಿಪಿ ಘಟಕದವರು ಶ್ರೀಕಾಂತ್ ಶೆಟ್ಟಿಯನ್ನು ಕರೆಸಿದ್ದರು. ಸರಕಾರಿ ಕಾಲೇಜಿನ ಕಾರ್ಯಕ್ರಮಕ್ಕೆ ಬಲಪಂಥೀಯ ಭಾಷಣಗಾರ ಬರುವುದಕ್ಕೆ ಎನ್‌ಎಸ್‌ ಯುಐ ವಿದ್ಯಾರ್ಥಿ ಸಂಘಟನೆಯವರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಪೊಲೀಸ್ ಕಮಿಷನರ್ ಮತ್ತು ಮಂಗಳೂರು ವಿವಿಯ ಕುಲಪತಿ ಜಯರಾಜ್ ಅಮೀನ್ ಅವರಿಗೆ ದೂರನ್ನು ನೀಡಿದ್ದರು.

ದೂರಿನ ಹಿನ್ನೆಲೆಯಲ್ಲಿ ಗೊಂದಲಕ್ಕೆ ಆಸ್ಪದ ಆಗದಂತೆ ಕಾಲೇಜಿನ ಪ್ರಿನ್ಸಿಪಾಲ್ ಅನಸೂಯ ರೈ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಿದ್ದಾರೆ. ಅಲ್ಲದೆ, ಜೂನ್ 24ರ ಶನಿವಾರ ನಡೆಯಬೇಕಿದ್ದ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮವನ್ನೂ ಮುಂದೂಡಿದ್ದು, ಈ ಬಗ್ಗೆ ಪ್ರಕಟಣೆ ನೀಡಿದ್ದಾರೆ. ಶುಕ್ರವಾರ ಮತ್ತು ಶನಿವಾರ ಎಂದಿನಂತೆ ಕಾಲೇಜು ತರಗತಿಗಳು ನಡೆಯಲಿದ್ದು ವಿದ್ಯಾರ್ಥಿಗಳು ಸಮವಸ್ತ್ರಧರಿಸಿ ಬರುವಂತೆ ಸೂಚನೆ ನೀಡಿದ್ದಾರೆ.

- Advertisement -

Related news

error: Content is protected !!