Sunday, May 5, 2024
spot_imgspot_img
spot_imgspot_img

ಮಂಗಳೂರು: ಲಾರಿ-ಬೈಕ್‌ ನಡುವೆ ಭೀಕರ ಅಪಘಾತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

- Advertisement -G L Acharya panikkar
- Advertisement -

ಮಂಗಳೂರು: ಲಾರಿ ಚಾಲಕನೋರ್ವನ ನಿರ್ಲಕ್ಷ್ಯ ಚಾಲನೆಯಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಮಕ್ಕಳೂ ಸೇರಿ 4 ಜನ ಗಂಭೀರವಾಗಿ ಗಾಯಗೊಂಡ ಇಬ್ಬರು ಸಾವನ್ನಪ್ಪಿದ್ದ ಘಟನೆ ಮಂಗಳೂರು ಹೊರವಲಯದ ಕಲ್ಲಾಪುವಿನಲ್ಲಿ ನಡೆದಿದೆ.

ಗಂಗಾಧರ (45), ಪತ್ನಿ ನೇತ್ರಾವತಿ (48), ಮಗಳು ಮೋಕ್ಷ (4)ಹಾಗೂ ನೇತ್ರಾವತಿಯ ಅಕ್ಕನ ಮಗನಾದ ಜ್ಞಾನೇಶ್ (6) ಪಂಪ್ವೆವೆಲ್‌ನಿಂದ ತೊಕ್ಕೊಟ್ಟು ಕಡೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿರುವಾಗ ಅತೀ ವೇಗವಾಗಿ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ.‍ ಢಿಕ್ಕಿ ಪರಿಣಾಮ ರಸ್ತೆಗೆ ಬಿದ್ದು ಗಂಗಾಧರ್ ಹಾಗೂ ನೇತ್ರಾವತಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮಕ್ಕಳಾದ ಜ್ಞಾನೇಶ್ ಹಾಗೂ ಮೋಕ್ಷಾ ಕೂಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಜಾಗರೂಕತೆಯಿಂದ ಲಾರಿ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದ್ದು ಚಾಲಕ ಹನೀಫ್‌ನನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!