Tuesday, September 29, 2026
spot_imgspot_img
spot_imgspot_img

ಮಂಗಳೂರು: ವಿಮಾನ ನಿಲ್ದಾಣದ ರನ್’ವೇ ನಲ್ಲಿ ಚಿರತೆ ಪ್ರತ್ಯಕ್ಷ; ಆತಂಕ ಗೊಂಡ ಭದ್ರತಾ ಸಿಬ್ಬಂದಿ

- Advertisement -
- Advertisement -

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇನಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಇದು ಇಲ್ಲಿನ ಭದ್ರತಾ ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಸಿದೆ. ವಿಮಾನ ನಿಲ್ದಾಣದ ಪಕ್ಕದಲ್ಲಿನ ಕಿರು ಅರಣ್ಯದಿಂದ ಆಹಾರ ಅರಸಿ ಬರುತ್ತಿರುವ ಚಿರತೆಯನ್ನು ಕಂಡ ಭದ್ರತಾ ಸಿಬ್ಬಂದಿಗಳು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ಕಾರ್ಯಾಚರಣೆ ನಡೆಸುವಂತೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಚಿರತೆಯನ್ನು ಸೆರೆಹಿಡಿಯಲು ವಿಮಾನ ನಿಲ್ದಾಣ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.

- Advertisement -

Related news

error: Content is protected !!