Sunday, June 14, 2026
spot_imgspot_img
spot_imgspot_img

ಮಂಗಳೂರು: ಅಥೆನಾ ಆಸ್ಪತ್ರೆಯ ವೈದ್ಯರೊಬ್ಬರಿಗೆ ಹಲ್ಲೆ ನಡೆಸಿದ್ದ ಇಬ್ಬರು ಅರೆಸ್ಟ್!

- Advertisement -
- Advertisement -

ಮಂಗಳೂರು: ಮಂಗಳೂರಿನ ಫಳ್ನೀರ್​ನಲ್ಲಿರುವ ಅಥೆನಾ ಆಸ್ಪತ್ರೆಯ ವೈದ್ಯ ಡಾ. ಜಯಪ್ರಕಾಶ್ ಕೊರೊನಾ ರೋಗಿಯ ಚಿಕಿತ್ಸೆಗೆ ಸಂಬಂಧಿಸಿ ಕುಟುಂಬಸ್ಥರು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಮಂಗಳೂರು ಪೋಲಿಸರು ಬಂಧಿಸಿದ್ದಾರೆ.

ಮಂಗಳೂರಿನ ಫಳ್ನೀರ್​ನಲ್ಲಿರುವ ಅಥೆನಾ ಆಸ್ಪತ್ರೆಯ ವೈದ್ಯ ಡಾ. ಜಯಪ್ರಕಾಶ್ ಮೇಲೆ ಕೊರೊನಾ ರೋಗಿಯ ಚಿಕಿತ್ಸೆಗೆ ಸಂಬಂಧಿಸಿದಂತೆ ಕುಟುಂಬಸ್ಥರು ಹಲ್ಲೆ ನಡೆಸಿದ್ದು, ಈ ಕುರಿತು ವೈದ್ಯರ ಮೇಲೆ ಹಲ್ಲೆ ಹಾಗೂ ಕೊರೊನಾ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿತ್ತು. ನಗರದ ಮಾರ್ನಮಿಕಟ್ಟೆಯ ಶಂಶೀರ್ ಆಲಿ (43), ಚೊಕ್ಕಬೆಟ್ಟುವಿನ ಸರ್ಫರಾಜ್ (43) ಬಂಧಿತರಾಗಿದ್ದಾರೆ. ಈ ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!