Monday, June 8, 2026
spot_imgspot_img
spot_imgspot_img

ಮಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಹಲ್ಲೆಗೈದ ತಂಡ

- Advertisement -
- Advertisement -

ಮಂಗಳೂರು: ಪಿ.ಎ. ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಮೇಲೆ ನಗರದ ಸರ್ವಿಸ್ ಬಸ್‌ಸ್ಟ್ಯಾಂಡ್ ಬಳಿ ತಂಡವೊಂದು ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಪಿಎ ಕಾಲೇಜಿನಲ್ಲಿ 2ನೇ ವರ್ಷದ ಡಿಪ್ಲೊಮಾ ಕಲಿಯುತ್ತಿದ್ದ ಮನ್ಸೂರ್ ಎಂದು ಗುರುತಿಸಲಾಗಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿ ಮನ್ಸೂರ್‌ನನ್ನು ಮಂಗಳೂರಿನ ವೆನ್ಮಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಲೇಜಿನಲ್ಲಿ ಪರೀಕ್ಷೆ ಬರೆದು ಮನೆಗೆ ವಾಪಾಸಾಗಲು ನಗರದ ಸರ್ವಿಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ತಂಡವೊಂದು ಮನ್ಸೂರ್ ಮೇಲೆ ದಾಳಿ ನಡೆಸಿದೆ. ಮಾಹಿತಿ ಪಡೆದ ವಿದ್ಯಾರ್ಥಿ ಸಂಘಟನೆಯ ಕ್ಯಾಂಪಸ್ ಫ್ರಂಟ್ ನಿಯೋಗ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ವೆನ್ಮಾಕ್ ಆಸ್ಪತ್ರೆ ಮುಂಭಾಗ ಪ್ರತಿಭಟನೆ
ವಿದ್ಯಾರ್ಥಿ ಮೇಲಿನ ಹಲ್ಲೆಗೆ ಬಜರಂಗದಳ ಕಾರಣ ಎಂದು ಕ್ಯಾಂಪಸ್ ಫ್ರಂಟ್ ಆರೋಪಿಸಿದ್ದು, ತಪ್ಪಿತಸ್ಥ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫಂಟ್ ದ.ಕ ಜಿಲ್ಲಾಧ್ಯಕ್ಷ ಸಿರಾಜ್ ಮಂಗಳೂರು ನೇತೃತ್ವದಲ್ಲಿ ವೆನ್ಮಾಕ್ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಯಿತು.

- Advertisement -

Related news

error: Content is protected !!