Saturday, June 28, 2025
spot_imgspot_img
spot_imgspot_img

ಮಂಗಳೂರು: ಖಾಸಗಿ ಫೈನಾನ್ಸ್‌ಗೆ ನುಗ್ಗಿ ದರೋಡೆಗೆ ಯತ್ನ: ಮೂವರು ಅರೆಸ್ಟ್..!

- Advertisement -
- Advertisement -

ಮಂಗಳೂರು: ಬಜಪೆ ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸ್ ಸೊಸೈಟಿಯಲ್ಲಿ ಬುರ್ಖಾ ಧರಿಸಿಕೊಂಡು ಬಂದು ಮಹಿಳೆ ಮೇಲೆ ಆಸಿಡ್ ಹಾಕಿ ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬಂಧೀತ ಆರೋಪಪಿಗಳನ್ನು ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31), ಸುರತ್ಕಲ್ ಕೋಡಿಕರೆಯ ಧನರಾಜ್ ಯಾನೆ ಧನು (30) ಹಾಗೂ ಬಾಳ ಕುಂಬಳಕೆರೆಯ ಕುಸುಮಾಕರ ಯಾನೆ ಅಣ್ಣು (37) ಎಂದು ಗುರುತಿಸಲಾಗಿದೆ.

ಪೊಲೀಸರು ಆರೋಪಿಗಳಿಂದ ಸುಮಾರು 15 ಲಕ್ಷ ರೂ. ಮೌಲ್ಯದ ಇನೋವಾ ಕಾರು, ಸ್ವಿಫ್ಟ್ ಕಾರು ಮತ್ತು ಸ್ಕೂಟರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು ತಾಲೂಕು ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿ ಕುನ್ಹಾ ಅವರ ಬಜಪೆ ಪೇಟೆಯಲ್ಲಿರುವ ಬಜಪೆ ಫೈನಾನ್ಸ್ಗೆ ಜು. 4.ರಂದು ಸಂಜೆ ಮೂವರು ಆರೋಪಿಗಳು ಚಿನ್ನಾಭರಣ ದರೋಡೆ ಮಾಡಲು ಪ್ರಯತ್ನಿಸಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.

ಬಂಧಿತ ಆರೋಪಿಗಳ ಪೈಕಿ ಪ್ರೀತೇಶ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ ಒಂದು ಕಳವು ಪ್ರಕರಣ, ಧನರಾಜ್ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ 2 ಹಾಗೂ ಮೂಡುಬಿದರೆ ಠಾಣೆಯಲ್ಲಿ 1 ಕೊಲೆಯತ್ನ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಒಂದು ಜೀವ ಬೆದರಿಕೆ ಪ್ರಕರಣ, ಕುಸುಮಾಕರನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ 1 ಕಳವು ಪ್ರಕರಣಗಳು ದಾಖಲಾಗಿರುತ್ತವೆ.

- Advertisement -

Related news

error: Content is protected !!