Saturday, June 28, 2025
spot_imgspot_img
spot_imgspot_img

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ; ಆರೋಪಿ ಅರೆಸ್ಟ್..!

- Advertisement -
- Advertisement -

ಮಂಗಳೂರು: ಮಾದಕ ವಸ್ತು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಉತ್ತರ ಉಪ ವಿಭಾಗದ ಡ್ರಗ್ಸ್ ಸ್ಮಾಡ್ ಸಿಬ್ಬಂದಿ ಹಾಗೂ ಕಾವೂರು ಠಾಣಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮುಹಮ್ಮದ್ ಫರಾಝ್ ಎಂದು ಗುರುತಿಸಲಾಗಿದೆ.

ಈತ ನಗರದ ಮೇರಿಹೀಲ್ ಹೆಲಿಪ್ಯಾಡ್ ಬಳಿ ಮಾದಕ ವಸ್ತುವಾದ ಮೆಥಾಂಫೆಟಮೈನ್ ಅಕ್ರಮವಾಗಿ ಮಾರಾಟಕ್ಕೆ ಯತ್ನಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನಿಂದ ಸುಮಾರು 30 ಸಾವಿರ ರೂ. ಮೌಲ್ಯದ 7.28 ಗ್ರಾಂನಷ್ಟು ಮೆಥಾಂಫೆಟಮೈನ್ ದ್ವಿಚಕ್ರ ವಾಹನವೊಂದನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!