- Advertisement -
- Advertisement -



ಮಂಗಳೂರು: ಬಾಗಲಕೋಟೆ ಮೂಲದ ಯುವಕನೊಬ್ಬನನ್ನು ಹರಿತವಾದ ಆಯುಧದಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ತೋಟಬೆಂಗ್ರೆಯ ಬೀಚ್ ಬಳಿ ನಡೆದಿದೆ.
ಮೃತಪಟ್ಟ ಯುವಕನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಮುತ್ತು ಬಸವರಾಜ ವಡ್ಡರ್ (39) ಎಂದು ಗುರುತಿಸಲಾಗಿದೆ.
ಈತ ಎರಡು ವಾರದ ಹಿಂದೆ ಕೂಲಿ ಕೆಲಸ ಅರಸಿಕೊಂಡು ಬಂದಿದ್ದ ಎನ್ನಲಾಗಿದೆ. ಈತನಿಗೆ ಯಾರೋ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -