Friday, September 4, 2026
spot_imgspot_img
spot_imgspot_img

ಮಂಗಳೂರು: ಸಮುದ್ರದಲ್ಲಿ ಸಿಲುಕಿಕೊಂಡ ಬೋಟ್ ನಿಂದ ಮೂವರು ಮೀನುಗಾರರ ರಕ್ಷಣೆ

- Advertisement -
- Advertisement -

ಮಂಗಳೂರು: ಕರಾವಳಿಯಲ್ಲಿ ತೌಕ್ತೆ ಚಂಡಮಾರುತದಿಂದಾಗಿ ಶುಕ್ರವಾರ ರಾತ್ರಿಯಿಂದಲೇ ಮಳೆ ಸುರಿಯುತ್ತಿದೆ. ಸಮುದ್ರದಲ್ಲಿ ಎಂಜಿನ್‌ ಸಮಸ್ಯೆಯಿಂದ ಬೋಟ್ ವೊಂದು ಸಿಲುಕಿದ ಪರಿಣಾಮ ಅದರಲ್ಲಿದ್ದ ಮೂವರು ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ.

ಕಣ್ಣೂರಿನಿಂದ 10 ನಾಟಿಕಲ್‌ ಮೈಲಿ ದೂರದಲ್ಲಿ ದೋಣಿ ಕೆಟ್ಟು ನಿಂತಿದ್ದು, ಈ ಕುರಿತು ಕರಾವಳಿ ಕಾವಲು ಪಡೆ ಸಿಬ್ಬಂದಿ ಮಾಹಿತಿ ಪಡೆದು, ವಿಕ್ರಮ್‌ ಹಡಗಿನೊಂದಿಗೆ ಕಾರ್ಯಾಚರಣೆ ನಡೆಸಿ, ಮೂವರನ್ನು ರಕ್ಷಿಸಲಾಗಿದೆ. ರಕ್ಷಿಸಿದ ಮೀನುಗಾರರಿಗೆ ಆಹಾರ, ವೈದ್ಯಕೀಯ ನೆರವು ನೀಡಲಾಗಿದೆ.

ಮಾರುಕಟ್ಟೆಯಲ್ಲಿ ಅಗತ್ಯ ವಸ್ತಗಳನ್ನು ಕೊಳ್ಳಲು ಬಂದ ಜನರಿಗೆ ಮಳೆ ಅಡ್ಡಿಯನ್ನುಂಟು ಮಾಡಿದೆ. ವೀಕೆಂಡ್ ಕರ್ಪ್ಯೂ ತೆರವುಗೊಳಿಸಿದ್ದರಿಂದ ಕಾರ್ಮಿಕರು ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಸಿದ್ಧರಾಗಿದ್ದರೂ ಮಳೆಯಿಂದಾಗಿ ಹೊರಗೆ ಹೋಗದಂತಾಗಿದೆ.

- Advertisement -

Related news

error: Content is protected !!