- Advertisement -
- Advertisement -




ಮಂಗಳೂರು: ಬಾಲಿವುಡ್ ಕ್ವೀನ್ ನಟಿ ಶಿಲ್ಪಾಶೆಟ್ಟಿ ಯವರು ತನ್ನ ಹುಟ್ಟೂರು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವು ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಸುರತ್ಕಲ್ ತಾಲೂಕಿನ ದೇಲಂತಬೆಟ್ಟು ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ರಹ್ಮಕುಂಭಾಭಿಷೇಕ, ಅಷ್ಟಪವಿತ್ರ ನಾಗಮಂಡಲ ಸೇವೆ, ಜಾತ್ರಾ ಮಹೋತ್ಸವದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಟುಂಬ ಸಮೇತ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಬಳಿಕ ಕುತ್ತಾರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ತಾಯಿ ಸುನಂದಾ ಶೆಟ್ಟಿ ಮಕ್ಕಳಾದ ವಿಯಾನ್ ಕುಂದ್ರಾ ಮತ್ತು ಸಮಿಷಾ ಕುಂದ್ರಾ ಇವರನ್ನು ಸನ್ಮಾನಿಸಲಾಯಿತು.
- Advertisement -