Friday, April 26, 2024
spot_imgspot_img
spot_imgspot_img

ಮಂಗಳೂರು: ಖ್ಯಾತ ಉದ್ಯಮಿ ನೇಣಿಗೆ ಶರಣು!

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರಿನ ಖ್ಯಾತ ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಗುರುಪುರದ ನಿವಾಸಿ ಉದ್ಯಮಿ ಚಂದ್ರಶೇಖರ್ ಶೆಟ್ಟಿ (38) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.

ಇವರು ಹಂಪನಕಟ್ಟೆಯಲ್ಲಿ ಕಚೇರಿ ಹೊಂದಿದ್ದರು.ತಮ್ಮ ಕಚೇರಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.ಇವರು ಆತ್ಮಹತ್ಯೆಗೆ ಯತ್ನಿಸಿದ್ದನ್ನು ಗಮನಿಸಿದ ಸ್ಥಳೀಯ ಅಂಗಡಿಯವರು ಆಸ್ಪತ್ರೆಗೆ ಕರೆದುಕೊಂಡು ಹೋದರು ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.

ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.ಉತ್ತರ (ಬಂದರ್) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

- Advertisement -

Related news

error: Content is protected !!