Friday, April 26, 2024
spot_imgspot_img
spot_imgspot_img

ಮಂಗಳೂರು: ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಮಹಿಳೆ ಮೃತ್ಯು ! : ಮೂವರಿಗೆ ಗಂಭೀರ ಗಾಯ

- Advertisement -G L Acharya panikkar
- Advertisement -

ಮಂಗಳೂರು: ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು ಇನ್ನೂ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು ನಗರದ ಹೊರವಲಯದಲ್ಲಿನ ಕುಳಾಯಿಯಲ್ಲಿ ನಡೆದಿದೆ.

ಮೃತ ಮಹಿಳೆ ಸುಹಾನಾ (26) ಎಂದು ಗುರುತಿಸಲಾಗಿದ್ದು, ಫಾತಿಮಾ ಶೌರೀನ್, ರಾಹಿಲ್ ಶಮೀಮ್, ರಾಝಿಕ್ ಶಹಾನ್ ಗಾಯಾಳುಗಳು. ಇವರನ್ನ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಇವರು ತೆರಳುತ್ತಿದ್ದ ವೇಳೆ ಮಾರ್ಗದಲ್ಲಿ ಊಟ ಪ್ಯಾಕ್ ಮಾಡಿಕೊಂಡು ಕೃಷ್ಣಾಪುರ ಚೊಕ್ಕಬೆಟ್ಟುವಿಗೆ ತೆರಳಿದ್ದರು. ಆ ಸಮಯದಲ್ಲಿ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.

ಕಾರು ಚಲಾಯಿಸುತ್ತಿದ್ದ ರಾಹಿಲ್ ಶಮೀಮ್‌ಗೆ ವಿರುದ್ಧ ದಿಕ್ಕಿನಲ್ಲಿ ಮತ್ತೊಂದು ಕಾರು ಬಂದ ಹಿನ್ನಲೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನ ನಡೆಸಿದಾಗ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಕಾರಲ್ಲಿದ್ದ ನಾಲ್ಕು ಮಂದಿಗೂ ಗಾಯವಾಗಿದ್ದು, ಆ ಪೈಕಿ ಸುಹಾನಾ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸುಹಾನಾ ಅವರು ಪತಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಗಳೂರಿನ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!