Sunday, June 14, 2026
spot_imgspot_img
spot_imgspot_img

ಮಂಗಳೂರು: ಪಂಪ್‌ವೆಲ್ ಫ್ಲೈಓವರಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಢಿಕ್ಕಿ!

- Advertisement -
- Advertisement -

ಮಂಗಳೂರು: ಪಂಪ್‌ವೆಲ್ ಫ್ಲೈಓವರಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನಡೆದಿದೆ.

ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆತನ ಬಗ್ಗೆ ಹೆಚ್ಚಿನ ವಿವರ ತಿಳಿದುಬಂದಿಲ್ಲ.

ನಗರದ ಗೋರಿಗುಡ್ಡ ಕಡೆಯಿಂದ ನಂತೂರು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದ ವೇಳೆ ಕಾರು ಹಿಂದುಗಡೆಯಿಂದ ಬಂದು ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಇದರಿಂದ ರಸ್ತೆಗೆಸೆಯಲ್ಪಟ್ಟ ದ್ವಿಚಕ್ರ ವಾಹನ ಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ.

driving
- Advertisement -

Related news

error: Content is protected !!