- Advertisement -
- Advertisement -
ಮಂಗಳೂರು: ಡ್ರಗ್ ಜಾಲ ಪ್ರಕರಣದ ತನಿಖೆ ನಡೆಸುತ್ತಿದ್ದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಅವರ ವರ್ಗಾವಣೆ ಆದೇಶವನ್ನು ತಡೆಹಿಡಿಯಲಾಗಿದೆ.

ಕಿಶೋರ್ ಅಮನ್ ಬಂಧನ ಬಳಿಕ ನಿರೂಪಕಿ ಅನುಶ್ರೀಗೂ ಸಿಸಿಬಿ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದರು. ಅನುಶ್ರೀ ಪ್ರಕರಣದಲ್ಲಿ ರಾಜಕೀಯ ವ್ಯಕ್ತಿಗಳ ಕೈವಾಡದ ಬಗ್ಗೆ ಮಾಹಿತಿ ಹೊರಬೀಳುತ್ತಿದ್ದಂತೆ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.

ಶಿವಪ್ರಕಾಶ್ ವರ್ಗಾವಣೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ವಿರೋಧ ಕೇಳಿಬಂದಿತ್ತು.ಪ್ರಕರಣದ ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನಲೆಯಲ್ಲಿ ವರ್ಗಾವಣೆ ಆದೇಶವನ್ನು ತಡೆಹಿಡಿಯಲಾಗಿದೆ. ಶಿವಪ್ರಕಾಶ್ ಅವರೇ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಆಗಿ ಮುಂದುವರಿಯಲಿದ್ದಾರೆ.

- Advertisement -