Monday, May 13, 2024
spot_imgspot_img
spot_imgspot_img

ಮಂಗಳೂರು: ಮಸೂದ್, ಫಾಝಿಲ್, ಜಲೀಲ್, ದೀಪಕ್ ರಾವ್ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿ; ತಲಾ 25 ಲಕ್ಷ ರೂ. ಘೋಷಣೆ

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ಬೆಳ್ಳಾರೆಯ ಮಸೂದ್, ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ ಕಾಟಿಪಳ್ಳದ ದೀಪಕ್ ರಾವ್ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕಳೆದ ವರ್ಷದ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು ಎಂದು ಪ್ರಕರಣ ದಾಖಲಾಗಿತ್ತು. ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡುವಂತೆ ಒಳಾಡಳಿತ ಇಲಾಖೆಯನ್ನು ಕೋರಿದ ಮೇರೆಗೆ ಈ ಪರಿಹಾರ ಘೋಷಿಸಲಾಗಿದ್ದು, ಜೂ.19ರಂದು ಪರಿಹಾರದ ಧನದ ಚೆಕ್ ಪಡೆಯುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!