- Advertisement -
- Advertisement -


ಮಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟುವಿನ ರಾಕೇಶ್ ಮತ್ತು ಶಾಲೆಪದವಿನ ದಿನೇಶ್ ಕುಮಾರ್ ಬಂಧಿತರು. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಘಟನೆಗೆ ಸಂಬಂಧಿಸಿ ಐದು ಎಫ್ ಐ ಆರ್ ದಾಖಲಿಸಿದ್ದು, ಕೃತ್ಯದಲ್ಲಿ ಭಾಗಿಯಾದ ಇತರ ಆರೋಪಿಗಳ ವಿರುದ್ಧ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ.
ಮೇ 10 ರಂದು ಮತದಾನದ ಬಳಿಕ ಮೂಡುಶೆಡ್ಡೆಯ ಮತಗಟ್ಟೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದಿದೆ. ಹೊಡೆದಾಟದಲ್ಲಿ ಕಾಂಗ್ರೇಸ್ ಮುಖಂಡ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಘಟನೆಯ ನಂತರ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.14ರವರೆಗೆ 144 ಸೆಕ್ಷನ್ ಜಾರಿಗೊಳಿಸಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
- Advertisement -








