Thursday, April 25, 2024
spot_imgspot_img
spot_imgspot_img

ಕರಾವಳಿಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

- Advertisement -G L Acharya panikkar
- Advertisement -

ಮಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ವೇಳೆ ಅವರಿಗೆ ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸಲು ಆಶೀರ್ವದಿಸಿ ಅನುಗ್ರಹಿಸಲಿ ಎಂದು ಪ್ರಾರ್ಥಿಸಿ ಸ್ವಾಮಿಯ ಪ್ರಸಾದವನ್ನು ನೀಡಲಾಯಿತು.

ನಗರದ ಹೃದಯ ಭಾಗದಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸನ್ ವಿಭಾಗದ ನೂತನ ಐಸಿಯು ಘಟಕವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆ.12ರ ಗುರುವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್,

ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್, ಶಾಸಕ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಎಚ್ಒ ಡಾ. ಕಿಶೋರ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

- Advertisement -

Related news

error: Content is protected !!