Thursday, May 2, 2024
spot_imgspot_img
spot_imgspot_img

ಮಂಗಳೂರು: ಕಾಂಗ್ರೇಸ್‌-ಬಿಜೆಪಿ ಸಂಘರ್ಷ; ಕಾಂಗ್ರೇಸ್‌ ಯುವ ಮುಖಂಡ ಮಿಥುನ್‌ ರೈ ಕಾರಿನ ಮೇಲೆ ಕಲ್ಲು ತೂರಾಟ

- Advertisement -G L Acharya panikkar
- Advertisement -

ಕಮೀಷನರೇಟ್‌ನ 5 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನಲ್ಲಿ ಚುನಾವಣೋತ್ತರ ಸಂಘರ್ಷ ನಡೆದಿದೆ. ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಮಿಥುನ್‌ ರೈ ಕಾರಿನ ಮೇಲೆ ನಗರದ ಮೂಡುಶೆಡ್ಡೆಯ ಬಳಿ ಕಲ್ಲು ತೂರಾಟ ನಡೆಸಲಾಗಿದೆ.

ಸಂಜೆ ವೇಳೆ ಮಿಥುನ್‌ ರೈ ನಗರದ ಮೂಡುಶೆಡ್ಡೆ ಬಳಿ ತಲುಪಿದಾಗ ಬಿಜೆಪಿ ಪಕ್ಷದ ಪರ ಘೋಷಣೆ ಕೇಳಿ ಬಂದಿದೆ. ಈ ವೇಳೆ ಮಿಥುನ್‌ ರೈ ಜೊತೆಗಿದ್ದವರೂ ಸಹ ಘೋಷಣೆ ಕೂಗಿದ್ದಾರೆ. ಇದರಿಂದ ಮಾತಿನ ಚಕಮಕಿ ನಡೆದು ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ. ತಕ್ಷಣವೇ ಎರಡೂ ಪಕ್ಷದ ಕಾರ್ಯಕರ್ತರು ಜಮಾಯಿಸಿದ್ದು, ಕಲ್ಲು ತೂರಾಟ ನಡೆದಿದೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ಕೆ.ಎಸ್‌.ಆರ್‌ಪಿ, ಸಿಆರ್‌ಪಿಎಫ್‌ ತುಕಡಿ ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.

ನಿಷೇಧಾಜ್ಞೆ ಜಾರಿ

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆ ಯಲ್ಲಿ ನಡೆದ ಕಾಂಗ್ರೆಸ್-ಬಿಜೆಪಿ ಸಂಘರ್ಷದ ಹಿನ್ನೆಲೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕಾವೂರು, ಸುರತ್ಕಲ್, ಬಜ್ಪೆ ,ಮೂಡುಬಿದಿರೆ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕಾನೂನು ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಮೇ 14ರ ಬೆಳಗ್ಗೆ 6ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಆದೇಶ ಹೊರಡಿಸಿದ್ದಾರೆ.ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ, ಯಾವುದೇ ಸಮಸ್ಯೆಯಿಲ್ಲ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಘಟನೆಯಲ್ಲಿ ಓರ್ವ ಪೊಲೀಸ್ ಅಧಿಕಾರಿಗೂ ಗಾಯವಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ.

- Advertisement -

Related news

error: Content is protected !!