- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅದನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ತುರ್ತು ಕ್ರಮ ಕೈಗೊಳ್ಳುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೋಟಾ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಪ್ರಮುಖ ಸಭೆ ಗುರುವಾರ ನಡೆಯಿತು.

ದಕ್ಷಿಣ ಕನ್ನಡ ಸಂಸದರೂ, ಭಾಜಪಾ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ಡಾ. ವೈ ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ಯುಟಿ ಖಾದರ್, ಜಿಲ್ಲಾಧಿಕಾರಿಯವರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.



- Advertisement -