- Advertisement -
- Advertisement -

ಮಂಗಳೂರು: ಕೊರೊನಾ ಮಾಹಾಮಾರಿಗೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಚಿತ್ರಪುರದ ರೆಹೆಜಾ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.

ಮಂಗಳೂರು ಬಳಿಯ ಚಿತ್ರಾಪುರದ ರೆಹೆಜಾ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದ ರಮೇಶ್ ಕುಮಾರ್ ದಂಪತಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕೊರೊನಾಗೆ ಹೆದರಿ ಮನೆಯಲ್ಲಿರುವ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.




- Advertisement -








