Friday, April 19, 2024
spot_imgspot_img
spot_imgspot_img

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಅನ್ ಲಾಕ್ ಇದ್ರೂ ಈ ನಿಯಮ ಪಾಲಿಸಲೇಬೇಕು; ಸಚಿವ ಕೋಟ

- Advertisement -G L Acharya panikkar
- Advertisement -

ಮಂಗಳೂರು: ಲಾಕ್ ಡೌನ್ ಸಡಿಲಿಕೆ ಆಗುತ್ತಿದ್ದಂತೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು ಹಾಗೂ ನಿತ್ಯ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಾಣಿಜ್ಯ ಚಟುವಟಿಕೆ ಕೈಗೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಗೆ ಪ್ರಸ್ತುತ ಸರ್ಕಾರ ಸೂಚಿಸಿರುವ ಮಾರ್ಗಸೂಚಿಯನ್ನು ತಪ್ಪದೇ ಅನುಷ್ಠಾನ ಮಾಡುವುದರೊಂದಿಗೆ ಕೋವಿಡ್-19 ನಿಯಂತ್ರಣಕ್ಕೆ ಮುಂದಾಗಬೇಕು ಎಂದರು.

ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಪೂರ್ಣ ಪ್ರಮಾಣದ ಲಾಕ್‌ಡೌನ್ ಮಾಡಲಾಗುವುದು. ಹಾಲಿನ ಮಾರಾಟ ಕೇಂದ್ರಗಳನ್ನು ತೆರೆಯಲು ಮಾತ್ರ ಈ ಸಮಯದಲ್ಲಿ ಅವಕಾಶ ಮಾಡಿಕೊಡಲಾಗುವುದು. ಇತರೆ ಯಾವುದೇ ಚಟುಚಟಿಕೆಗಳಿಗೆ ಅವಕಾಶವಿಲ್ಲ ಎಂದು ತಿಳಿಸಿದರು. ಮದುವೆ ಹಾಗೂ ಸಮಾರಂಭಗಳಲ್ಲಿ 25 ಜನರಿಗೆ ಸೀಮಿತಗೊಳಿಸಿ ಮನೆಯಲ್ಲಿಯೇ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಯಾವುದೇ ಧಾರ್ಮಿಕ ಕೇಂದ್ರ, ಕಲ್ಯಾಣ ಮಂಟಪ ಹಾಗೂ ಇತರೆ ಭವನಗಳಲ್ಲಿ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ ಎಂದರು.

ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರಕ್ಕೆ ತಾಲ್ಲೂಕು ಕೇಂದ್ರಗಳು ಸೇರಿದಂತೆ ನಗರ ಪ್ರದೇಶದೊಳಗೆ ಓಡಾಡಲು ಅನುಕೂಲವಾಗುವಂತೆ ಮಧ್ಯಾಹ್ನ 1 ಗಂಟೆವರೆಗೆ ಅವಕಾಶ ನೀಡಲಾಗಿದೆ. ಶೇ 50 ರಷ್ಟು ಜನರಿಗೆ ಪ್ರಯಾಣಿಸಲು ಅವಕಾಶ ನೀಡಲಾಗುವುದು. ಬಸ್‌ನಲ್ಲಿ ಸಂಚರಿಸುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸುವ ಷರತ್ತಿನ ಅನ್ವಯ ಅನುಮತಿ ನೀಡಬೇಕು ಎಂದರು. ಶಾಸಕರಾದ ಉಮಾನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ಡಾ.ವೈ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಪ್ರತಾಪ್‍ಚಂದ್ರ ಶೆಟ್ಟಿ, ಹರೀಶ್ ಕುಮಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಡಿಸಿಪಿ ಹರಿರಾಂ ಶಂಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಉಪಸ್ಥಿತರಿದ್ದರು.

ಲಾಕ್‌ಡೌನ್‌ ನಿರ್ಬಂಧ ಸಡಿಲಿಕೆಯ ಕುರಿತಂತೆ ನಿನ್ನೆ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು ಈ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲ ಅಂಗಡಿ ತೆರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದರು. ಆದರೆ, ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಹೊರಡಿಸಿದ್ದ ಆದೇಶದಲ್ಲಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಂಗಡಿ ತೆರೆಯಲು ಅವಕಾಶ ನೀಡಲಾಗಿತ್ತು. ಮತ್ತೆ ಮುಖ್ಯಮಂತ್ರಿ ಜೊತೆ ಚರ್ಚಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸರಿಪಡಿಸಲು ಮನವಿ ಮಾಡಿದರು. ಕೊನೆಗೆ ಜಿಲ್ಲಾಧಿಕಾರಿ ಪರಿಷ್ಕೃತ ಆದೇಶ ಹೊರಡಿಸಿ, ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿರುವುದಾಗಿ ಸ್ಪಷ್ಟಪಡಿಸಿದರು.

- Advertisement -

Related news

error: Content is protected !!