Monday, June 22, 2026
spot_imgspot_img
spot_imgspot_img

ಮಂಗಳೂರಿಗೆ ದನ ಸಾಗಿಸುತ್ತಿದ್ದ ಲಾರಿ ಪಲ್ಟಿ- 10 ದನಗಳು ಸ್ಥಳದಲ್ಲೇ ಸಾವು

- Advertisement -
- Advertisement -

ಮಂಗಳೂರು: ಜಾನುವಾರು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 10 ದನಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ದಾನಸಾಲೆ ಹೊರಬೈಲು ಬಳಿ ನಡೆದಿದೆ.

ದಾವಣಗೆರೆಯಿಂದ ಮಂಗಳೂರಿಗೆ ದನಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದ್ದು. 10 ದನಗಳು ಸ್ಥಳದಲ್ಲೇ ಸಾವನ್ನಪ್ಪಿದೆ. 10ಕ್ಕೂ ಹೆಚ್ಚಿನ ದನಗಳು ಗಾಯಗೊಂಡಿದೆ. ಘಟನೆ ನಡೆದ ಕೂಡಲೇ ಲಾರಿಯ ಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ.

ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು ಈ ದನಗಳನ್ನು ಕಸಾಯಿಖಾನೆಗೆ ಸಾಗಿಸಲಾಗಿತ್ತೋ ಅಥವಾ ಗೋ ಶಾಲೆಗೆ ಸಾಗಿಸಲಾಗುತ್ತಿತ್ತೋ ಎಂಬುವುದು ಪೊಲೀಸರ ತನಿಖೆಯಿಂದಷ್ಟೆ ತಿಳಿದು ಬರಬೇಕಿದೆ.

- Advertisement -

Related news

error: Content is protected !!