Saturday, May 4, 2024
spot_imgspot_img
spot_imgspot_img

ಮಂಗಳೂರು: ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು..!!

- Advertisement -G L Acharya panikkar
- Advertisement -
vtv vitla

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಈ ಬಗ್ಗೆ ವಿದ್ಯಾರ್ಥಿನಿ ತಾಯಿ ಕದ್ರಿ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

ನಗರದ ಬಿಜೈಯ ಅಪಾರ್ಟ್ ಮೆಂಟ್ ಒಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ದಂಪತಿಗಳ ಮಗಳು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆಯಾಗಿದ್ದು ನಗರದ ಕಾಲೇಜ್ ಒಂದರಲ್ಲಿ ದ್ವಿತೀಯ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ನಿನ್ನೆ ರಾತ್ರಿ ತಾಯಿ ಅಪಾರ್ಟ್‌ಗಳ ಕಸ ಸಂಗ್ರಹಿಸಲು ತೆರಳಿದ್ದಾಗ ರೂಮ್ ನಲ್ಲಿ ಒಬ್ಬಳೇ ಇದ್ದ ವಿದ್ಯಾರ್ಥಿನಿ ಬಾಗಿಲು ಲಾಕ್ ಮಾಡಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಕೊಂಡಿದ್ದಾಳೆ.

ಕಸ ಬಿಸಾಡಿ ವಾಪಾಸ್ ಬಂದಾಗ ರೂಂ ಬಾಗಿಲು ಲಾಕ್ ಆಗಿದ್ದು, ಎಷ್ಟೇ ಬಡಿದರೂ ಬಾಗಿಲು ತೆರೆಯದನ್ನು ನೋಡಿ ಕಿಟಿಕಿಯಿಂದ ಗಮನಿಸಿದಾಗ ಮಗಳು ಫ್ಯಾನ್‌ಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಕೂಡಲೇ ಅಪಾರ್ಟ್ ಮೆಂಟ್ ನವರು ಬಾಗಿಲು ಒಡೆದು ಕುಣಿಕೆಯಿಂದ ಕೆಳಗಿಸಿ ಉಪಚರಿಸಲು ಯತ್ನಿಸಿದ್ದರೂ ಅದಾಗಲೇ ಆಕೆಯ ಪ್ರಾಣ ಪಕ್ಷಿ ಹಾರಿಯಾಗಿತ್ತು.

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ನೊಂದು ಈ ಕೃತ್ಯ ಮಾಡಿದ್ದಾಳೆ ಎಂದು ವಿದ್ಯಾರ್ಥಿನಿಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!