Monday, June 22, 2026
spot_imgspot_img
spot_imgspot_img

ಮಂಗಳೂರು: ಡ್ರಿಂಕ್ ಆ್ಯಂಡ್ ಡ್ರೈವ್; ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಪಾದಚಾರಿಗೆ ಡಿಕ್ಕಿ ಸ್ಥಳದಲ್ಲೇ ಸಾವು!

- Advertisement -
- Advertisement -

ಮಂಗಳೂರು: ಮದ್ಯ ಸೇವಿಸಿದ್ದ ಪಿಡಬ್ಲ್ಯೂಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚಲಾಯಿಸಿದ ಕಾರು ಡಿಕ್ಕಿ ಹೊಡೆದ ಪರಿಣಾಮ, ಪಾದಾಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರಂತ ನಗರದ ಕದ್ರಿ ಪ್ರವಾಸಿ ಮಂದಿರ ರಸ್ತೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಬಿಎಸ್‌ಎನ್‌ಎಲ್‌‌ ನಿವೃತ್ತ ಉದ್ಯೋಗಿ ಆನಂದ ಎಂದು ಗುರುತಿಸಲಾಗಿದೆ. ಆರೋಪಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ ಮಂಗಳೂರು ಉಪವಿಭಾಗದ ಎಇಇ ಶಣ್ಮುಗಂ ಅವರನ್ನು ಬಂಧಿಸಲಾಗಿದೆ.

ಭಾನುವಾರ ರಾತ್ರಿ 9.53ಕ್ಕೆ ಈ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಆನಂದ ಅವರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಡಿಕ್ಕಿಯ ರಭಸಕ್ಕೆ ಪಾದಚಾರಿ ಆನಂದ ಸುಮಾರು ದೂರದವರೆಗೆ ಎಗರಿ ಬಿದ್ದು ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ಪತ್ನಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!