Tuesday, April 23, 2024
spot_imgspot_img
spot_imgspot_img

ಮಂಗಳೂರು:ಡ್ರಗ್ಸ್ ಸಾಗಟ ಪ್ರಕರಣ, ಆರೋಪಿಗಳು 7 ದಿನ ಪೊಲೀಸ್ ಕಸ್ಟಡಿಗೆ.

- Advertisement -G L Acharya panikkar
- Advertisement -

ಮಂಗಳೂರು : ಡ್ರಗ್ಸ್ ಸೇವನೆ ಹಾಗೂ ಸಾಗಾಟ ಆರೋಪದಲ್ಲಿ ಶನಿವಾರ ಬೆಳಗ್ಗೆ ನಗರದಲ್ಲಿ ಬಂಧಿತರಾಗಿದ್ದ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ನ್ಯಾಯಾಲಯ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಬಂಧಿತ ಆರೋಪಿಗಳಾದ ಅಕೀಲ್ ನೌಶೀಲ್ (28) ಮತ್ತು ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ (30) ಎಂಬ ಆರೋಪಿಗಳನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಈ ಇಬ್ಬರು ಆರೋಪಿಗಳನ್ನು ನಗರ ಅಪರಾಧ ಪತ್ತೆ ದಳ ಮತ್ತು ನಾರ್ಕೊಟಿಕ್ಸ್ ಪೊಲೀಸರು ಬಂಧಿಸಿದ್ದರು.

ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಗಳನ್ನು ಕೋವಿಡ್ ತಪಾಸಣೆಗೊಳಪಡಿಸಿದ ಬಳಿಕ ಏಳು ದಿನಗಳ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ. ಡ್ಯಾನ್ಸರ್ ಆಗಿರುವ ಕಿಶೋರ್ ಅಮನ್ ಶೆಟ್ಟಿ ನೃತ್ಯ ಪ್ರದರ್ಶನದ ವೇಳೆ ಎನರ್ಜಿ ಬರಲು ಮಾದಕ ಸೇವನೆ ಚಟ ಅಂಟಿಸಿಕೊಂಡಿದ್ದ ಎಂದು ತನಿಖೆಯ ವೇಳೆ ಬಯಲಾಗಿದೆ. ಇದೀಗ ಆರು ತಿಂಗಳಿನಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿ ರುವುದರಿಂದ ಮಾದಕ ವಸ್ತುಗಳ ಮಾರಾಟ ದಂಧೆಗಿಳಿದಿದ್ದ ಎಂದು ಪೊಲೀಸ್ ವಿಚಾರಣೆ ವೇಳೆ ತಿಳಿದು ಬಂದಿದೆ.

- Advertisement -

Related news

error: Content is protected !!