Saturday, April 27, 2024
spot_imgspot_img
spot_imgspot_img

ಮಂಗಳೂರು: ಡ್ರಗ್ಸ್ ಮಾರಾಟ ಪ್ರಕರಣ; ಇಬ್ಬರು ಆರೋಪಿಗಳು ಬೆಂಗಳೂರಲ್ಲಿ ಅರೆಸ್ಟ್!

- Advertisement -G L Acharya panikkar
- Advertisement -

ಮಂಗಳೂರು: ಡ್ರಗ್ಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ನೈಜೀರಿಯಾದ ಇಬ್ಬರು ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.‌ಶಶಿಕುಮಾರ್ ತಿಳಿಸಿದ್ದಾರೆ.

ನೈಜೀರಿಯಾ ಪ್ರಜೆಗಳನ್ನು ಪೌಲ್ ಒಹಮೋಬಿ ಮತ್ತು ಉಚೆಚುಕು ಮಲಾಕಿ ಎಲಕ್ವಾಚಿ ಬಂಧಿತರಾಗಿದ್ದಾರೆ. ಇವರಿಬ್ಬರನ್ನೂ ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಜೂನ್ 3 ರಂದು ಮನಾಫ್, ಮುಝಾಂಬಿಲ್, ಅಹಮ್ಮದ್ ಮಸೂಕ್ ಎಂಬವರನ್ನು ವಶಕ್ಕೆ ಪಡೆದು 170 ಗ್ರಾಂ ಎಂ.ಡಿ.ಎಂ.ಎಂ ಡ್ರಗ್ಸ್ ವಶಕ್ಕೆ ಪಡೆಯಲಾಗಿದ್ದು, ಜೂನ್ 13 ರಂದು ಉಪ್ಪಳ ನಿವಾಸಿಗಳಾದ ಶಫೀಕ್.ಕೆ.ಎಸ್. ಮತ್ತು ಅಲ್ತಾಫ್ ರನ್ನು ವಶಕ್ಕೆ ಪಡೆದು 65 ಗ್ರಾಂ ಎಂ.ಡಿ.ಎಂ.ಎಂ ಡ್ರಗ್ಸ್ ವಶಕ್ಕೆ ಪಡೆಯಲಾಗಿತ್ತು. ವಿಚಾರಣೆ ಸಂದರ್ಭ ತಮಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಸ್ಟ್ಯಾನ್ಲಿ ಚಿಮಾ ಮತ್ತು ಉಪ್ಪಳದ ರಮೀಜ್ ಬಗ್ಗೆ ಮಾಹಿತಿ ನೀಡಿದ್ದು ಅವರನ್ನು ಬಂಧಿಸಲಾಗಿತ್ತು. ಸ್ಟ್ಯಾನ್ಲಿ ಮತ್ತು ರಮೀಜ್ ನನ್ನು ವಿಚಾರಣೆ ಮಾಡಿದಾಗ ಬೆಂಗಳೂರಿನಲ್ಲಿರುವ ನೈಜೀರಿಯಾ ಮೂಲದ ಪೌಲ್ ಒಹಮೋಬಿ ಮತ್ತು ಉಚೆಚುಕು ಮಲಾಕಿ ಎಲಕ್ವಾಚಿ ರಿಂದ ಡ್ರಗ್ಸ್ ಖರೀದಿಸಿದ್ದಾಗಿ ಹೇಳಿದ್ದಾರೆ. ಹೀಗಾಗಿ ಬೆಂಗಳೂರಿಗೆ ತೆರಳಿದ ನಗರ ಪೊಲೀಸರು ಬಿದರಹಳ್ಳಿಯಲ್ಲಿ ಇವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ತಿಳಿಸಿದ್ದಾರೆ.

- Advertisement -

Related news

error: Content is protected !!