Saturday, June 28, 2025
spot_imgspot_img
spot_imgspot_img

ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ನಾಪತ್ತೆ; ಪ್ರಕರಣ ದಾಖಲು..!

- Advertisement -
- Advertisement -

ಮಂಗಳೂರು: ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಾಪತ್ತೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ವಿದ್ಯಾರ್ಥಿನಿ ಸ್ಪೂರ್ತಿ(18) ಎಂದು ಗುರುತಿಸಲಾಗಿದೆ.

ನ.16ರಂದು ತನಗೆ ಕರೆ ಮಾಡಿದ ಸ್ಪೂರ್ತಿ ಪಿಜಿಯಿಂದ ಕಾಲೇಜಿಗೆ ಹೋಗಿ ಬಳಿಕ ಚಿಕ್ಕಮಗಳೂರಿಗೆ ಮನೆಗೆ ಬರುವುದಾಗಿ ತಿಳಿಸಿದ್ದಳು. ಅದರಂತೆ ರಾತ್ರಿ 11ಕ್ಕೆ ತಾನು ಆಕೆಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್‌ ಬಂದಿತ್ತು. ನ.17ರಂದು ಮಂಗಳೂರಿಗೆ ಬಂದು ಪಿಜಿ ಹಾಗೂ ಕಾಲೇಜಿನ ಪ್ರಾಧ್ಯಾಪಕರು, ಸ್ನೇಹಿತರಲ್ಲಿ ವಿಚಾರಿಸಿದರೂ ಪತ್ತೆಯಾಗಿಲ್ಲ ಎಂದು ಸ್ಫೂರ್ತಿಯ ತಾಯಿ ಗಾಯತ್ರಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!