- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಖಾಸಗಿ ಶಾಲೆಗಳ ಬಗ್ಗೆ ಪತ್ರಿಕಾ ಮಾಧ್ಯಮದಲ್ಲಿ ನೀಡಿದ ಹೇಳಿಕೆಯನ್ನು ಮರುಪರಿಶೀಲಿಸಬೇಕು ಎಂದು ಒಕ್ಕೂಟದ ವತಿಯಿಂದ ಜೂ. 11ರಂದು ಮನವಿ ನೀಡಲಾಯಿತು.

ಮಾನ್ಯ ಜಿಲ್ಲಾಧಿಕಾರಿಯವರಿಗೆ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದ ಬಳಿಕ ಜಿಲ್ಲಾಧಿಕಾರಿಗಳು ಮನವಿಯನ್ನು ಸ್ವೀಕರಿಸಿದರು. ದ.ಕ. ಮತ್ತು ಉಡುಪಿ ಜಿಲ್ಲೆಗಳ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ಕೋಶಾಧಿಕಾರಿ ಸೀತಾರಾಮ ರೈ ಸವಣೂರು, ಉಪಾಧ್ಯಕ್ಷರಾದ ಮುಸಬ್ಬ. ಪಿ. ಬ್ಯಾರಿ, ಕಾರ್ಯದರ್ಶಿ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಜತೆ ಕಾರ್ಯದರ್ಶಿ ಜಯಸೂರ್ಯ ರೈ, ಅಶ್ವಿನ್ ಎಲ್. ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


- Advertisement -








