Monday, June 15, 2026
spot_imgspot_img
spot_imgspot_img

ಮಂಗಳೂರು : ಪೊಲೀಸರೊಂದಿಗೆ ಎಂಟ್ರಿ ಕೊಟ್ಟ ಮಾಜಿ ಪ್ರೇಯಸಿ; ಮದುವೆ ಮಂಟಪದಲ್ಲೇ ನಡೆಯಿತು ಹೈಡ್ರಾಮಾ..!

- Advertisement -
- Advertisement -

ಮಂಗಳೂರು : ಮದುವೆಯ ವೇಳೆ ಮದುಮಗನ ಮಾಜಿ ಪ್ರೇಯಸಿ ಪೊಲೀಸರೊಂದಿಗೆ ಎಂಟ್ರಿ ಕೊಟ್ಟು ಹೈಡ್ರಾಮಾ ಕ್ರಿಯೆಟ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ.

ಆರೋಪಿ ಕೇರಳ ಮೂಲದ ಅಕ್ಷಯ್ ಎಂದು ಗುರುತಿಸಲಾಗಿದೆ.

ಕೇರಳ ಮೂಲದ ಅಕ್ಷಯ್ ಎಂಬಾತನ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯುತ್ತಿದ್ದಾಗ ಮೈಸೂರು ಮೂಲದ ಮಾಜಿ ಪ್ರೇಯಸಿ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟು ಹೈಡ್ರಾಮ ನಡೆಸಿದ್ದಾಳೆ. ಇತ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದನು. ನಂತರ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ನಂತರ ವರಸೆ ಬದಲಾಯಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಈ ನಡುವೆ ಯುವತಿ ಡಿಸೆಂಬರ್ 26 ರಂದು ಅಕ್ಷಯ್ ವಿರುದ್ಧ ಕೇರಳದ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾಳೆ.

ಇನ್ನು ಪ್ರಕರಣ ಸಂಬಂಧ ಅರೋಪಿ ಅಕ್ಷಯ್​ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ಈ ನಡುವೆ ಮಂಗಳೂರಿನ ಯುವತಿ ಜೊತೆ ಅಕ್ಷಯ್​ಗೆ ವಿವಾಹ ನಿಶ್ಚಯವಾಗಿದೆ. ಕರ್ನಾಟಕದ-ಕೇರಳ ಗಡಿಭಾಗ ಬೀರಿಯ ಖಾಸಗಿ ಹಾಲ್​ನಲ್ಲಿ ಮದುವೆ ನಡೆಯುತ್ತಿರುವ ವಿಚಾರ ತಿಳಿದು ಉಳ್ಳಾಲ ಪೊಲೀಸರೊಂದಿಗೆ ಆಗಮಿಸಿ ಹಾಲ್​ ಮುಂಭಾಗದಲ್ಲಿ ಹೈಡ್ರಾಮ ನಡೆಸಿದ್ದಾಳೆ.

ನಂತರ ಪೊಲೀಸರೇ ಆಕೆಯನ್ನು ಹಾಲ್ ಬಳಿಯಿಂದ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಆರೋಪಿಯನ್ನು ಅರೆಸ್ಟ್ ಮಾಡಿ ಅಂದರೆ ನನ್ನನ್ನೇ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಯುವತಿ ಆಕ್ರೋಶ ಹೊರಹಾಕಿದ್ದಾಳೆ. ನಂತರ ಅಕ್ಷಯ್ ಮಂಗಳೂರು ಯುವತಿಗೆ ತಾಳಿ ಕಟ್ಟಿದ್ದಾನೆ.

- Advertisement -

Related news

error: Content is protected !!