Saturday, June 28, 2025
spot_imgspot_img
spot_imgspot_img

ಮಂಗಳೂರು ನಗರದಲ್ಲಿ ಎರಡು ಕಡೆ ಬೆಂಕಿ ಅವಘಡ

- Advertisement -
- Advertisement -

ಮಂಗಳೂರು : ಮಂಗಳೂರು ನಗರದಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಎರಡು ಕಡೆ ಬೆಂಕಿ ಅವಘಡ ಸಂಭವಿಸಿದೆ.

ಬ್ಯಾಂಕ್ ಒಫ್ ಬರೋಡ ಹಂಪನಕಟ್ಟೆ ಶಾಖೆಯಲ್ಲಿ ಬುಧವಾರ ಮುಂಜಾನೆ ಸುಮಾರು ಐದು ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿಗಳು ತಕ್ಷಣ ಬೆಂಕಿ ನಡಿಸಿದ ಪರಿಣಾಮ ಹೆಚ್ಚಿನ ಅವಘಡಗಳು ಸಂಭವಿಸಿಲ್ಲ ಎನ್ನಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ನಗರದ ಸಿ.ವಿ.ನಾಯಕ್ ಹಾಲ್ ಬಳಿಯ ಭುವನೇಂದ್ರ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ಮುಂಜಾನೆ ಪಾರ್ಕ್ ಮಾಡಲಾಗಿದ್ದ 5 ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿದೆ.

ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಲು ಸಹಕರಿಸಿದ್ದಾರೆ, ಈ ಘಟನೆಯಲ್ಲಿ ಒಟ್ಟು ಐದು ಬೈಕ್ ಗಳು ಬೆಂಕಿಗಾಹುತಿಯಾಗಿವೆ.

- Advertisement -

Related news

error: Content is protected !!