Sunday, June 21, 2026
spot_imgspot_img
spot_imgspot_img

ಮಂಗಳೂರು: ಬೈಕ್ ಗೆ ಮೀನಿನ ಲಾರಿ ಡಿಕ್ಕಿ; ಸವಾರ ಮೃತ್ಯು..!

- Advertisement -
- Advertisement -

ಮಂಗಳೂರು : ಬೈಕ್ ಗೆ ಮೀನು ಸಾಗಿಸುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನಮೊಗರಿನಲ್ಲಿ ನಡೆದಿದೆ.

ಮೃತರನ್ನು ಸುರತ್ಕಲ್ ಕಾಟಿಪಳ್ಳ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್ ಎಂದು ಗುರುತಿಸಲಾಗಿದೆ.

ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ, ಹಿಂದಿನಿಂದ ಬರುತ್ತಿದ್ದ ಮೀನಿನ ಲಾರಿ ಅತಿ ವೇಗದ ಚಾಲನೆಯಿಂದ ಬೈಕಿಗೆ ಡಿಕ್ಕಿಯಾಗಿದೆ. ಬೈಕಿನ ಮಿರರ್ ಗೆ ತಾಗಿದ್ದರಿಂದ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು ತಲೆ ಮತ್ತು ದೇಹದ ಮೇಲಿನಿಂದಲೇ ಲಾರಿಯ ಚಕ್ರ ಹರಿದು ಹೋಗಿದೆ. ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

- Advertisement -

Related news

error: Content is protected !!