- Advertisement -
- Advertisement -
ಮಂಗಳೂರು: ಬೈಕಂಪಾಡಿ ವಿದ್ಯಾರ್ಥಿ ಸಂಘ, ನಾಡದೋಣಿ ಮೀನುಗಾರರ ಸಂಘ, ರೆಡ್ ಕ್ರಾಸ್ ಸಂಸ್ಥೆ ಇದರ ಜಂಟಿ ಸಹಯೋಗದಲ್ಲಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಬೈಕಂಪಾಡಿ ವಿದ್ಯಾರ್ಥಿ ಸಂಘದ ಕಚೇರಿಯಲ್ಲಿ ಬುಧವಾರ ಚಾಲನೆ ನೀಡಿದರು.

ಕಾರ್ಪೋರೇಟರ್ ಸುಮಿತ್ರಾ ಕರಿಯ, ಪಾಲಿಕೆ ನಾಮ ನಿರ್ದೇಶಿತ ಸದಸ್ಯ ರಾಜೇಶ್ ಬೈಕಂಪಾಡಿ, ರೆಡ್ ಕ್ರಾಸ್ ರಾಜ್ಯ ಸಮಿತಿ ಸದಸ್ಯ ಯತೀಶ್ ಬೈಕಂಪಾಡಿ, ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಅಶ್ವಥ್, ಬೈಕಂಪಾಡಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಓಂದಾಸ್, ಮೊಗವೀರ ಸಂಘದ ಉಪಾಧ್ಯಕ್ಷ ಎನ್ ಆರ್ ಪುರುಷೋತ್ತಮ್ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.



- Advertisement -








