Saturday, June 28, 2025
spot_imgspot_img
spot_imgspot_img

ಮಂಗಳೂರು : ಫುಡ್ ಪಾಯಿಸನ್‌ನಿಂದ ಹಾಸ್ಟೆಲ್‌ ವಿದ್ಯಾರ್ಥಿಗಳು ಅಸ್ವಸ್ಥ..!

- Advertisement -
- Advertisement -

ಮಂಗಳೂರು: ರಾತ್ರಿ ಊಟ ಸೇವಿಸಿದ ನೂರಾರು ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಗರದ ಹೊರವಲಯದಲ್ಲಿರುವ ಹಾಸ್ಟೆಲ್‌ ನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಖಾಸಗಿ ಕಾಲೇಜೊಂದರ  ಹಾಸ್ಟೆಲ್‌ನಲ್ಲಿ ಎಂದಿನಂತೆ ಬುಧವಾರ ರಾತ್ರಿ ಕೂಡಾ ವಿದ್ಯಾರ್ಥಿಗಳು ಊಟ ಮಾಡಿದ್ದಾರೆ. ಆದರೆ ಊಟ ಮಾಡಿದ ಕೆಲವೇ ಕ್ಷಣಗಳಲ್ಲಿ ಹಲವು ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಬಳಿಕ ಹೊಟ್ಟೆ ನೋವು ತೀವ್ರಗೊಂಡು ಕೆಲವು ವಿದ್ಯಾರ್ಥಿಗಳು ವಾಂತಿ ಮಾಡಲು ಆರಂಭಿಸಿದ್ದು, ಕೆಲವು ವಿದ್ಯಾರ್ಥಿಗಳು ತಲೆ ಸುತ್ತು ಬಂದು ಬಿದ್ದಿದ್ದಾರೆ. ತಕ್ಷಣ ವಿದ್ಯಾರ್ಥಿಗಳನ್ನು  ತುಂಬೆಯ ಫಾದರ್‌ ಮುಲ್ಲರ್‌ ಆಸ್ಪತ್ರೆ ಹಾಗೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಕೆಲವು ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದು, ಕೆಲವು ವಿದ್ಯಾರ್ಥಿಗಳು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ. ಊಟದಲ್ಲಿ ಯಾವುದೋ ಹುಳು ಬಿದ್ದು ಫುಡ್ ಪಾಯಿಸನ್ ಆಗಿರುವ ಸಾದ್ಯತೆ ಇದೆ ಎಂದು ವಿದ್ಯಾರ್ಥಿಗಳೇ ಹೇಳಿಕೊಂಡಿದ್ದಾರೆ. ಹಾಸ್ಟೆಲ್‌ಗೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳು ಸೇವಿಸಿದ ಆಹಾರ ಪರಿಶೀಲಿಸಿದ್ದಾರೆ

- Advertisement -

Related news

error: Content is protected !!