Tuesday, April 30, 2024
spot_imgspot_img
spot_imgspot_img

ಮಂಗಳೂರು: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ಹೃದಯಾಘಾತದಿಂದ ನಿಧನ

- Advertisement -G L Acharya panikkar
- Advertisement -

ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ಮಾಜಿ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪಿ.ಜಯರಾಮ ಭಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

2009ರ ಕರ್ನಾಟಕ ಬ್ಯಾಂಕ್ ನಲ್ಲಿ ಅಧಿಕಾರ ವಹಿಸಿಕೊಂಡಿದ್ದು ಮೂರು ಅವಧಿಗೆ ಬ್ಯಾಂಕ್ ನಾಯಕತ್ವ ವಹಿಸಿದ್ದರು. ಇವರ ಅವಧಿಯಲ್ಲಿ ಇ-ಲಾಬಿ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್, ಆನ್‌ಲೈನ್ ಟ್ರೇಡಿಂಗ್ ಅಕೌಂಟ್, ಟ್ರಾವೆಲ್ ಕಾರ್ಡ್, ಗಿಫ್ಟ್ ಕಾರ್ಡ್ ಮುಂತಾದ ಯಶಸ್ವಿ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರಿಂದ ಭಾರೀ ಮೆಚ್ಚುಗೆ ಗಳಿಸಿದ್ದು ಮಾತ್ರವಲ್ಲದೇ ಅವರ ಆಡಳಿತ ಅವಧಿಯಲ್ಲಿ ಕರ್ಣಾಟಕ ಬ್ಯಾಂಕ್ ಸರ್ವಾಂಗೀಣ ಪ್ರಗತಿ ಕಂಡಿತ್ತು.

ಜಯರಾಮ್ ಭಟ್ ಅವರಿಗೆ ಅತ್ಯುತ್ತಮ ಮ್ಯಾನೇಜರ್ ಅವಾರ್ಡ್, ಅತ್ಯುತ್ತಮ ಸಾಧಾನಾ ಪ್ರಶಸ್ತಿ, ಮಣಿಪಾಲ ವಿವಿಯಿಂದ 2015ರ ಹೊಸ ವರ್ಷದ ಪ್ರಶಸ್ತಿ ಪಡೆದುಕೊಂಡಿದ್ದರು.

- Advertisement -

Related news

error: Content is protected !!