Sunday, June 14, 2026
spot_imgspot_img
spot_imgspot_img

ಮಂಗಳೂರು: ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು..!

- Advertisement -
- Advertisement -

ಮಂಗಳೂರು: ಬಹುಮಹಡಿ ಅಪಾರ್ಟ್‌ಮೆಂಟ್‌ನ 12 ನೇ ಮಹಡಿಯಿಂದ ಬಿದ್ದು 15 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುತ್ತಾರ್‌ನಲ್ಲಿ ನಡೆದಿದೆ.

ಮೃತಪಟ್ಟ ಬಾಲಕಿಯನ್ನು ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯಲ್ಲಿ ವೈದ್ಯ ದಂಪತಿಯಾಗಿರುವ ಡಾ. ಮುಮ್ತಾಝ್ ಅಹಮ್ಮದ್ ಮತ್ತು ಖಮ್ರಾಜ್ ಬಾನು ಅವರ ಹಿರಿಯ ಪುತ್ರಿ ಹಿಬಾ ಐಮನ್ (15) ಎಂದು ಗುರುತಿಸಲಾಗಿದೆ.

18 ಮಹಡಿ ಹೊಂದಿರುವ ಸಿಲಿಕೋನಿಯಾ ವಸತಿ ಸಂಕೀರ್ಣದ 12ನೇ ಮಹಡಿಯಲ್ಲಿ ವೈದ್ಯ ದಂಪತಿ ವಾಸ್ತವ್ಯ ಮಾಡುತ್ತಿದ್ದರು. ನಿನ್ನೆ ರಾತ್ರಿ ದಂಪತಿ ರಾತ್ರಿ ಪಾಳಿ ಕರ್ತವ್ಯಕ್ಕೆ ಆಸ್ಪತ್ರೆಗೆ ತೆರಳಿದ್ದರು. ಮನೆಯಲ್ಲಿ ಹಿಬಾ ಮತ್ತು ಆಕೆಯ ಕಿರಿಯ ಸಹೋದರ ಮಾತ್ರ ಇದ್ದರು. ಹಿಬಾ ರಾತ್ರಿ ವೇಳೆ ಬಾಲ್ಕನಿಯಲ್ಲಿ ಬಟ್ಟೆ ಒಣಗಲು ಹಾಕಲೆಂದು ಸ್ಟೂಲ್ ಮೇಲೆ ನಿಂತಾಗ ಆಯತಪ್ಪಿ ವಸತಿ ಸಂಕೀರ್ಣದ ಕಟ್ಟಡದಿಂದ ಕೆಳಗಡೆ ಬಿದ್ದು ಮೃತ ಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಮೃತ ಹಿಬಾ ಮಂಗಳೂರಿನ ಯೆನಪೋಯ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು. ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!