Thursday, June 18, 2026
spot_imgspot_img
spot_imgspot_img

ಮಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈನಿಂದ ಅಕ್ರಮ ಚಿನ್ನ ಸಾಗಾಟ-ಮಂಗಳೂರಿನ ವ್ಯಕ್ತಿಯ ಬಂಧನ

- Advertisement -
- Advertisement -

ಮಂಗಳೂರು(ಅ.28): ಮಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಮಂಗಳೂರಿನ ವ್ಯಕ್ತಿಯನ್ನು ಕಸ್ಟಂ ಅಧಿಕಾರಿಗಳು ಬಂಧಿಸಿದ್ದಾರೆ.

ಮಂಗಳೂರಿನ ಅಬೂಬಕ್ಕರ್ ಸಿದ್ದಿಕ್ ಬಂಧಿತ ಆರೋಪಿ. ಈತ ಸೋಮವಾರ (ಅ. 26) ದಂದು ದುಬೈನಿಂದ ಮಂಗಳೂರಿಗೆ ಬಂದ ಸ್ಪೈಸ್ ಜೆಟ್ ವಿಮಾನದಲ್ಲಿ ಬಂದಿದ್ದ. ಈತನನ್ನು ಶೋಧಿಸಿದಾಗ ಈತನ ಬಳಿ 24 ಕ್ಯಾರೆಟ್ ಪರಿಶುದ್ದತೆಯ 634 ಗ್ರಾಂ ಚಿನ್ನಸಿಕ್ಕಿದೆ. ಇದನ್ನು ಈತ ಪೌಡರ್ ರೂಪದಲ್ಲಿ ಅಡಗಿಸಿಟ್ಟು ತಂದಿದ್ದ. ಇದರ ಮೌಲ್ಯ 32 96800 ಎಂದು ಅಂದಾಜಿಸಲಾಗಿದೆ. ಚಿನ್ನವನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!