- Advertisement -
- Advertisement -


ಮಂಗಳೂರು: ದುಬೈನಿಂದ ಮಂಗಳೂರಿಗೆ ವಿಮಾನದ ಮೂಲಕ ಬಂದಿಳಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲಿಸಿದಾಗ ಆತನ ಬಳಿಯಿದ್ದ ಎಗ್ ಕುಕ್ಕರ್ ಹೀಟರ್ ಒಳಗಡೆ 5.58ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆಯಾಗಿರುವ ಘಟನೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಈ ಎಗ್ ಕುಕ್ಕರ್ ಹೀಟರ್ ನಲ್ಲಿ 116.400 ಗ್ರಾಂ ಚಿನ್ನ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ 5,58,720 ರೂ. ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.


- Advertisement -








