
ಮಂಗಳೂರು: ನಗರದಲ್ಲಿ ಹೋಮ್ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದ ಪಂಜಾಬಿ ಮೂಲದ ಯುವತಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಂಜಾಬ್ ಮೂಲದ ಲಿಶ್ಬ (21) ನಾಪತ್ತೆಯಾದ ಯುವತಿ.
ಯುವತಿ ಲಿಶ್ಬ ‘ವಿ ಕೇರ್ ನರ್ಸಿಂಗ್ ಹೋಮ್ ಪಿಜಿ’ಯಲ್ಲಿ ಕೆಲಸ ಮಾಡುತ್ತಾ ಅದೇ ಪಿಜಿಯಲ್ಲಿ ನೆಲೆಸಿದ್ದರು. ಆ.17ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಊರಿಗೆ ಹೋಗಿ ಬರುವುದಾಗಿ ಪಿಜಿ ಮಾಲಕರಿಗೆ ತಿಳಿಸಿದ ಯುವತಿ ಆ ಬಳಿಕ ನಾಪತ್ತೆಯಾಗಿದ್ದಾರೆ. ಮರುದಿನ (ಆ.18) ಬೆಳಗ್ಗೆ 9 ಗಂಟೆ ಸುಮಾರಿಗೆ ಯುವತಿಯ ತಾಯಿ ಕರೆ ಮಾಡಿದಾಗ ಆಕೆಯ ಮೊಬೈಲ್ ಸ್ವಿಚ್‌ಆಫ್ ಆಗಿತ್ತು. ನಂತರ ಪಿಜಿ ಮಾಲಕರು ಹಾಗೂ ಪರಿಚಯಸ್ಥರಲ್ಲಿ ವಿಚಾರಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
5.3 ಅಡಿ ಎತ್ತರವಿರುವ ಲಿಶ್ಬ, ಪಿಜಿಯಿಂದ ಯುವತಿ ತೆರಳುವ ಸಂದರ್ಭ ನೀಲಿ ಬಣ್ಣದ ಜೀನ್ಸ್ ಮತ್ತು ಕೆಂಪು ಬಣ್ಣದ ಟಾಪ್ ಧರಿಸಿದ್ದರು. ಹಿಂದಿ, ಪಂಜಾಬಿ ಮಾತನಾಡುತ್ತಾರೆ. ನಾಪತ್ತೆಯಾದ ಯುವತಿಯ ಬಗ್ಗೆ ತಿಳಿದುಬಂದಲ್ಲಿ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆ (0824- 2220518, 9480805339) ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.



