Monday, April 29, 2024
spot_imgspot_img
spot_imgspot_img

ಮಂಗಳೂರು: ಅಕ್ರಮ ಚಿನ್ನ ಸಾಗಾಟ; ಸುಮಾರು 60 ಲಕ್ಷ ಮೌಲ್ಯದ ಚಿನ್ನ ವಶ..!

- Advertisement -G L Acharya panikkar
- Advertisement -

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮೂರು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು , ಅವರಿಂದ 969 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಇಂಡಿಯನ್ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದ ಪ್ರಯಾಣಿಕರ ತಪಾಸಣೆ ವೇಳೆ ಈ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದೆ. ಮೂವರು ಪ್ರಯಾಣಿಕರು ಶೂ ಮತ್ತು ಚಾಕಲೇಟ್ ಬಾಕ್ಸ್ ಹಾಗೂ ಬೆಡ್ ಶೀಟ್ ಗಳಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 60, 07,800 ಎಂದು ಅಂದಾಜಿಸಲಾಗಿದೆ.

- Advertisement -

Related news

error: Content is protected !!