Sunday, June 29, 2025
spot_imgspot_img
spot_imgspot_img

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು ಅಕ್ರಮ ಚಿನ್ನ ಸಾಗಾಟ; 54 ಲಕ್ಷ ರೂ. ಮೌಲ್ಯದ ಚಿನ್ನ ಕಸ್ಟಮ್ ಅಧಿಕಾರಿಗಳ ವಶಕ್ಕೆ..!

- Advertisement -
- Advertisement -

ಮಂಗಳೂರು: ಪ್ರಯಾಣಿಕನೊಬ್ಬ 54.3 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಸ್ಟಮ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸೌದಿ ಅರೇಬಿಯಾದ ದಮ್ಮಾಮ್‌ನಿಂದ ಆಗಮಿಸಿದ ಪ್ರಯಾಣಿಕ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಇದನ್ನು ಗಮನಿಸಿದ ಅಧಿಕಾರಿಗಳು ಆತನನ್ನು ತಪಾಸಣೆಗೆ ಒಳಪಡಿಸಿದಾಗ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ.

ದಕ್ಷಿಣ ಕನ್ನಡ ಮೂಲದ ಪ್ರಯಾಣಿಕನಾದ ಈಗ ತನ್ನ ಗುದನಾಳದಲ್ಲಿ 54.3 ಲಕ್ಷ ರೂಪಾಯಿ ಮೌಲ್ಯದ 825 ಗ್ರಾಂ ತೂಕದ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮೂರು ಅಂಡಾಕಾರದ ವಸ್ತುಗಳಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ. ಹೊರತೆಗೆದು ಪ್ರಕ್ರಿಯೆಗಳನ್ನು ನಡೆಸಿದ ಬಳಿಕ ನಿವ್ವಳ 750 ಗ್ರಾಂ ತೂಕದ 24 ಕ್ಯಾರೆಟ್ ಶುದ್ಧತೆಯ ಚಿನ್ನ ಇರುವುದು ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!