Wednesday, May 15, 2024
spot_imgspot_img
spot_imgspot_img

ಮಂಗಳೂರು: ನಿಗೂಢ ಕೆಲಸಕ್ಕೆ ಅಕ್ರಮವಾಗಿ 42 ಸಿಮ್ ಕಾರ್ಡ್ ಖರೀದಿ; ಯುವಕರ ತಂಡ ಸೆರೆ..!

- Advertisement -G L Acharya panikkar
- Advertisement -

ಮಂಗಳೂರು: ನಿಗೂಢ ಕೆಲಸಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಿಮ್​ಗಳ ಸಾಗಾಟ ಬಯಲಿಗೆ ಬಂದಿದೆ.

ಆರೋಪಿಗಳನ್ನು ರಮೀಝ್ (20), ಅಕ್ಬರ್ ಅಲಿ (24), ಮೊಹಮ್ಮದ್ ಮುಸ್ತಫಾ (22) ಮೊಹಮ್ಮದ್ ಸಾಧಿಕ್ (27) ಎಂದು ಗುರುತಿಸಲಾಗಿದೆ.

ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸರ ಬಲೆಗೆ ಬಿದಿದೆ. ಫೆಬ್ರವರಿ 1 ರಂದು ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್​ಗಳನ್ನು ಜಪ್ತಿ ಮಾಡಲಾಗಿದೆ. ರಮೀಝ್ (20), ಅಕ್ಬರ್ ಅಲಿ (24), ಮೊಹಮ್ಮದ್ ಮುಸ್ತಫಾ (22) ಮೊಹಮ್ಮದ್ ಸಾಧಿಕ್ (27) ಬಂಧಿತ ಆರೋಪಿಯಾಗಿದ್ದು, ಪ್ರಕರಣದಲ್ಲಿ 17 ವರ್ಷದ ಅಪ್ರಾಪ್ತ ಬಾಲಕನೂ ಸಿಲುಕಿದ್ದಾನೆ.

ಆರೋಪಿ ಅಕ್ಬರ್​ ಅಲಿ ದುಬೈನಲ್ಲಿ ಇದ್ದಾಗ ಬೇರೆಯವರ ಹೆಸರಿನಲ್ಲಿ ನಕಲಿ ದಾಖಲೆ ಕೊಟ್ಟು ಸಿಮ್​ ಖರೀದಿ ಮಾಡಿದ್ದ. ಎರಡು ವರ್ಷಗಳ ಕಾಲ ದುಬೈನಲ್ಲಿದ್ದ ಈತ ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದ. ವಿದೇಶದ ನಂಟು ಇರುವುದರಿಂದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರಿನಿಂದ ಬೆಂಗಳೂರಿಗೆ ಆರೋಪಿಗಳು ಸಾಗಿಸುತ್ತಿದ್ದ ನಿಕಲಿ ಸಿಮ್​ಗಳು ಬೆಂಗಳೂರಿನಲ್ಲಿರುವ ಆಗಂತುಕರ ಕೈ ಸೇರುತ್ತಿತ್ತಾ ಎನ್ನುವ ಶಂಕೆ ವ್ಯಕ್ತವಾಗಿದೆ. ಅಕ್ಬರ್ ಆಲಿ ಮೊದಲಿನಿಂದಲೂ ದುಬೈನಲ್ಲಿ ಇದ್ದುಕೊಂಡೇ ಸಿಮ್ ಕಾರ್ಡ್ ಸಂಗ್ರಹಿಸುತ್ತಿದ್ದನು. ತನ್ನ ಸ್ನೇಹಿತ ಮೊಹಮ್ಮದ್ ಮುಸ್ತಫಾನ ಮೂಲಕ ಸಿಮ್​ಗಳನ್ನು ಕಲೆಕ್ಟ್​ ಮಾಡುತ್ತಿದ್ದನು.

ಮೊಹಮ್ಮದ್ ಮುಸ್ತಫಾ ತನ್ನ ಸ್ನೇಹಿತರಾಗಿರುವ ರಮೀಝ್ ಮತ್ತು ಮಹಮ್ಮದ್ ಸಾಧಿಕ್​ಗೆ ಸಿಮ್​ಗಳ ವ್ಯವಸ್ಥೆಗೆ ಸೂಚನೆ ನೀಡುತ್ತಿದ್ದನು. ಎಷ್ಟು ಸಿಮ್ ಕಾರ್ಡ್ ಬೇಕು ಅಷ್ಟುನ್ನು ತಮ್ಮ ಅತ್ಮಿಯರಿಂದ ಕಮಿಷನ್ ಕೊಡಿಸಿ ಕಲೆಕ್ಟ್ ಮಾಡಿ ಮುಸ್ತಫಾನಿಗೆ ನೀಡುತ್ತಿದ್ದರು. ನಂತರ ಅಕ್ಬರ್ ಅಲಿ ಹೇಳಿದಂತೆ ಸಿಮ್ ಕಾರ್ಡ್ ಮಹಮ್ಮದ್ ಮುಸ್ತಫಾ ಪಡೆದುಕೊಂಡು ಬೆಂಗಳೂರು ವ್ಯಕ್ತಿಗಳಿಗೆ ಖಾಸಗಿ ಬಸ್ ಮೂಲಕ ಕಳುಹಿಸುವ ಕೆಲಸ ಮಾಡುತ್ತಿದ್ದ ಎಂಬ ವಿಚಾರ ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ.

- Advertisement -

Related news

error: Content is protected !!