Saturday, May 18, 2024
spot_imgspot_img
spot_imgspot_img

ಮಂಗಳೂರು: Instagram ಮೂಲಕ ಪರಿಚಯ; ಲಾಡ್ಜ್‌ಗೆ ಕರೆದೊಯ್ದು 20 ದಿನಗಳ ಕಾಲ ನಿರಂತರ ದೈಹಿಕ ಸಂಪರ್ಕ- ಆರೋಪಿ ಅರೆಸ್ಟ್‌

- Advertisement -G L Acharya panikkar
- Advertisement -

ಮಂಗಳೂರು: ಇನ್‌ಸ್ಟಾಗ್ರಾಮ್‌ ಮೂಲಕ ಪರಿಚಯವಾದ ಯುವಕನೋರ್ವ ವಿವಾಹವಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಎಂದು ಯುವತಿಯೋರ್ವಳು ಆರೋಪಿಸಿ ಮಂಗಳೂರು ನಗರ ಠಾಣೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಮೂಲದ ಮುಸ್ಲಿಂ ಯುವತಿ ಮಂಗಳೂರಿನಲ್ಲಿ ಸ್ನಾತಕೋತ್ತರ ವ್ಯಾಸಂಗ‌ ಮಾಡುತ್ತಿದ್ದು, ಈ ವೇಳೆ ಕಡಬ ಮೂಲದ ಅನೀಸ್ ರೆಹಮಾನ್ ಎಂಬಾತನನ್ನು ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು.

ಮದುವೆಯಾಗುವುದಾಗಿ ನಂಬಿಸಿ ನಗರದ ಖಾಸಗಿ ಲಾಡ್ಜ್‌ಗೆ ಕರೆದೊಯ್ದಿದ್ದ. 20 ದಿನಗಳ ಕಾಲ ನಿರಂತರವಾಗಿ ದೈಹಿಕ ಸಂಬಂಧ ಹೊಂದಿದ್ದ ಎಂದು ಆಕೆ ಹೇಳಿಕೆ ನೀಡಿದ್ದಾಳೆ. ನಂತರ ಆರೋಪಿಗೆ ಈಗಾಗಲೇ ಮದುವೆಯಾಗಿರುವುದು ಸಂತ್ರಸ್ತೆಗೆ ತಿಳಿದು ಬಂದಿದ್ದು, ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಈ ಬಗ್ಗೆ ಯುವತಿಯು ಜೂನ್ 26 ರಂದು ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.

ಅನೀಶ್ ರೆಹಮಾನ್ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 506, 417 ಹಾಗೂ 376 ರಡಿ ಕೇಸು ದಾಖಲಿಸಿ ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ರೆಹಮಾನ್ ಈ ಹಿಂದೆ ಗಾಂಜಾ ಸೇವನೆ ಕೇಸ್​ನಲ್ಲಿ ಬಂಧಿತನಾಗಿದ್ದ. ಇದು ಕಾವೂರು ಠಾಣಾ ವ್ಯಾಪ್ತಿಗೆ ಸೇರಿದ್ದ ಪ್ರಕರಣವಾಗಿದೆ. ಇದರಲ್ಲಿ ಆತ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದಾನೆ

- Advertisement -

Related news

error: Content is protected !!