Saturday, April 20, 2024
spot_imgspot_img
spot_imgspot_img

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ನುಸುಳುಕೋರರನ್ನು ಪತ್ತೆ ಹಚ್ಚಿದ ಪೊಲೀಸರು!

- Advertisement -G L Acharya panikkar
- Advertisement -

ಮಂಗಳೂರು: ಅಕ್ರಮವಾಗಿ ನುಸುಳಿದ್ದ 38 ಮಂದಿ ಶ್ರೀಲಂಕಾ ಪ್ರಜೆಗಳ ವಶಕ್ಕೆ ಪಡೆದಿದ್ದು, ಉಳಿದವರ ಹುಡುಕಾಟ ಮುಂದುವರೆದಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಶ್ರೀಲಂಕಾದಿಂದ ತಮಿಳುನಾಡಿನ ತೂತುಕುಡಿಗೆ ಬಂದು ಅಲ್ಲಿಂದ ಕೆನಡಾಗೆ ಹೋಗುವವರಿದ್ದರು. ಶ್ರೀಲಂಕಾದಿಂದ ಮಾರ್ಚ್ 17ಕ್ಕೆ ಹೊರಟು ತಮಿಳುನಾಡಿಗೆ ಬಂದಿದ್ದು, ಆದರೆ ತಮಿಳುನಾಡು ಚುನಾವಣೆ ಹಿನ್ನೆಲೆ ಅವರನ್ನು ಮಂಗಳೂರಿಗೆ ತಂದು ಬಿಡಲಾಗಿತ್ತು ಎಂದು ಮಾಹಿತಿ ನೀಡಿದರು‌.

ಮಂಗಳೂರಿಗೆ ಬಂದು ಇಲ್ಲಿನ ಲಾಡ್ಜ್ ಗಳಲ್ಲಿ ತಿಂಗಳಿನಿಂದ ವಾಸ್ತವ್ಯ ಹೂಡಿದ್ದರು. ಮಂಗಳೂರಿನಲ್ಲೂ ಇವರಿಗೆ ಏಜೆಂಟ್ ಗಳಿರೋ ಸಾಧ್ಯತೆಯಿದ್ದು, ತನಿಖೆ ನಡೆಸ್ತಿದೇವೆ. ಅದಲ್ಲದೆ, ಬೇರೆ ದೇಶದ ವ್ಯಕ್ತಿಗಳು ಮಂಗಳೂರಿಗೆ ಆಗಮಿಸಿ ಅಕ್ರಮ ಆಶ್ರಯ ಪಡೆದಿರುವ ಬಗ್ಗೆ ತನಿಖೆ ಮುಂದುವರೆದಿದೆ ಎಂದರು.

ಈ ಸಂಬಂಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಇವರಿಗೆ ಆಶ್ರಯ ಕೊಟ್ಟ ಕಾರಣ ಮತ್ತು ನೆರವು ನೀಡಿದ ಕಾರಣ ಇಲ್ಲಿನ ಆರು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದರು.

- Advertisement -

Related news

error: Content is protected !!