Thursday, July 23, 2026
spot_imgspot_img
spot_imgspot_img

ಬೆಂಗಳೂರಿಂದ ಮಂಗಳೂರು ಕೇವಲ 5 ಗಂಟೆಯ ದಾರಿ: ಬರಲಿದೆ ವಂದೇ ಭಾರತ್‌!

- Advertisement -
- Advertisement -

ಮಂಗಳೂರು: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ಘಾಟ್ ರೈಲು ಮಾರ್ಗದ ವಿದ್ಯುದೀಕರಣ ಸಂಪೂರ್ಣಗೊಂಡಿದೆ. ಅಲ್ಲದೆ ಪ್ರಾಯೋಗಿಕ ರೈಲು ಸಂಚಾರ ಕೂಡ ಸಕ್ಸಸ್ ಆಗಿದೆ. ಇದರ ಬೆನ್ನಲ್ಲೇ ಇದೀಗ ವಂದೇಭಾರತ್ ರೈಲನ್ನು ಈ ಮಾರ್ಗದಲ್ಲಿ ಓಡಿಸುವ ಕುರಿತು ಹಲವಾರು ಮನವಿಗಳು ಬಂದಿದ್ದು, ಈ ಕುರಿತಂತೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸಿಹಿ ಸುದ್ದಿಯನ್ನು ನೀಡಿದ್ದಾರೆ.

ದೇಶದ ಅತ್ಯಂತ ಕಠಿಣ ರೈಲ್ವೆ ಮಾರ್ಗಗಳಲ್ಲಿ ಒಂದಾದ ತಾಂತ್ರಿಕವಾಗಿ ಸವಾಲಿನಿಂದ ಕೂಡಿದ್ದ ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡಿದ್ದು, ಇದರಿಂದ ಬೆಂಗಳೂರು ಮತ್ತು ಮಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಸಾಧ್ಯವಾಗಲಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

- Advertisement -

Related news

error: Content is protected !!