Wednesday, May 8, 2024
spot_imgspot_img
spot_imgspot_img

ಮಂಗಳೂರು: ರಾತ್ರಿ ವೇಳೆ ಕದ್ರಿ ದೇವಸ್ಥಾನದ ಅಂಗಣಕ್ಕೆ ಬಂದ ಮೂವರು ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ..!

- Advertisement -G L Acharya panikkar
- Advertisement -

ಮಂಗಳೂರು: ರಾತ್ರಿ ವೇಳೆ ಕದ್ರಿ ಮಂಜುನಾಥ ದೇವಸ್ಥಾನದ ಅಂಗಣಕ್ಕೆ ಬಂದ ಮೂವರು ಮುಸ್ಲಿಂ ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ನಡೆದಿದೆ. ಬೈಕಿನಲ್ಲಿ ಗುರುವಾರ ರಾತ್ರಿ ಪ್ರವೇಶಿಸಿದ್ದಾರೆ. ಇದನ್ನರಿತ ಸ್ಥಳೀಯರು ಯುವಕರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಯುವಕರು ಮಾತನಾಡಿರುವ ವೀಡಿಯೊವನ್ನು ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ತಿನ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಳ್ಳಲಾಗಿದೆ. ಅದರಲ್ಲಿ, ಯುವಕರು ತಮ್ಮನ್ನು ಮುಸ್ಲಿಮರೆಂದೂ ಅಸೈಗೋಳಿಯವರು ಎಂದೂ ಹೇಳಿಕೊಂಡಿದ್ದಾರೆ. ‘ಕಾಟಿಪಳ್ಳಕ್ಕೆ ಹೊರಟ ತಾವು ಜಿಪಿಎಸ್ ಹಾಕಿಕೊಂಡು ಬೈಕಿನಲ್ಲಿ ಹೋಗುತ್ತಿದ್ದೆವು. ದಾರಿ ತಪ್ಪಿ ಇಲ್ಲಿಗೆ ಬಂದೆವು’ ಎಂದೂ ಹೇಳಿಕೊಂಡಿದ್ದಾರೆ.

‘ದೇವಸ್ಥಾನ ಅಂಗಣದಲ್ಲಿ ಯುವಕರು ಸಂಶಯಾಸ್ಪದವಾಗಿ ತಿರುಗುತ್ತಿದ್ದರು. ಈ ಯುವಕರು ದೇವಸ್ಥಾನದ ಪ್ರಾಂಗಣಕ್ಕೆ ಬೈಕ್‌ ತಂದಿದ್ದಾರೆ. ಚಪ್ಪಲಿ ಹಾಕಿಕೊಂಡು ಓಡಾಡುತ್ತಿದ್ದರು’ ಎಂದು ಬಜರಂಗದಳವರು ಆರೋಪಿಸಿದ್ದಾರೆ. ವಿಷಯ ತಿಳಿದು ಸ್ಥಳೀಯರು ದೇವಸ್ಥಾನದ ಬಳಿ ಸೇರಿದ್ದು ಅವರನ್ನು ಪೊಲೀಸರು ಹೊರಗೆ ಕಳುಹಿಸಿದ್ದರು.

ಈ ದೇವಸ್ಥಾನಕ್ಕೆ ಭಯೋತ್ಪಾದಕರ ದಾಳಿ ನಡೆಯುವ ಶಂಕೆ ಇದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ (ಎನ್‌ಐಎ) ತನಿಖೆಗೆ ಒಳಪಡಿಸಬೇಕು ಎಂದು ಬಜರಂಗದಳ ಆಗ್ರಹಿಸಿದೆ.

ಪೊಲೀಸರು ವಿಚಾರಣಾ ಪ್ರಕ್ರಿಯೆ ಮುಂದುವರಿಸಿದ್ದಾರೆ. ಈ ಹಿಂದೆ ನಗರದಲ್ಲಿ ಕುಕ್ಕರ್‍ ಬಾಂಬ್ ಸ್ಪೋಟ ಪ್ರಕರಣದ ಶಾರಿಕ್ ಕದ್ರಿ ದೇವಾಲಯದ ಆವರಣದಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ. ಆದರೆ ಕುಕ್ಕರ್‍ ಬಾಂಬ್ ಗರೋಡಿ ಬಳಿಯೇ ಸ್ಟೋಟಗೊಂಡಿತ್ತು. ನಂತರ ಈ ಪ್ರಕರಣದ ವಿಚಾರಣೆಯನ್ನು ಎನ್‌ಎಐ ಅಧಿಕಾರಿಗಳ ತಂಡ ವಹಿಸಿಕೊಂಡಿತ್ತು.

- Advertisement -

Related news

error: Content is protected !!