Saturday, April 20, 2024
spot_imgspot_img
spot_imgspot_img

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇತಿಹಾಸದ ವೀರ ಪುರುಷರಾದ ಕೋಟಿ-ಚೆನ್ನಯ್ಯರ ಹೆಸರು ನಾಮಕರಣ ಮಾಡಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಗೆ ಮನವಿ

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇತಿಹಾಸದ ವೀರ ಪುರುಷರಾದ ಕೋಟಿ-ಚೆನ್ನಯ್ಯರ ಹೆಸರು ನಾಮಕರಣ ಮಾಡಬೇಕೆಂದು ಒತ್ತಾಯಿಸಿ, ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪನವರನ್ನು ಅವಿಭಜಿತ ದಕ್ಷಿಣ ಕನ್ನಡ – ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಮಾನ್ಯ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಭೇಟಿ ಮಾಡಿ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ವಿಧಾನ ಸಭೆಯ ಮುಖ್ಯ ಸಚೇತಕರಾದ ಶ್ರೀ ಸುನೀಲ್ ಕುಮಾರ್ ಕಾರ್ಕಳ, ಶಾಸಕರುಗಳಾದ ಶ್ರೀ ಸಂಜೀವ ಮಠಂದೂರು, ಶ್ರೀ ರಾಜೇಶ್ ನಾಯ್ಕ್, ಶ್ರೀ ರಘುಪತಿ ಭಟ್, ಶ್ರೀ ಉಮಾನಾಥ್ ಕೋಟ್ಯಾನ್, ಶ್ರೀ ಭರತ್ ಶೆಟ್ಟಿ, ಶ್ರೀ ವೇದವ್ಯಾಸ ಕಾಮತ್, ಶ್ರೀ ಹರೀಶ್ ಪೂಂಜಾ ಉಪಸ್ಥಿತರಿದ್ದರು.

- Advertisement -

Related news

error: Content is protected !!