Monday, May 6, 2024
spot_imgspot_img
spot_imgspot_img

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ; ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ..!

- Advertisement -G L Acharya panikkar
- Advertisement -

ಮಂಗಳೂರು: ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

ಏ. 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ. ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ.

ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

- Advertisement -

Related news

error: Content is protected !!